ಹೈದರಾಬಾದ್ ಕರ್ನಾಟಕ ಪ್ರದೇಶ

ಹೈದರಾಬಾದ್ ಕರ್ನಾಟಕ ಪ್ರದೇಶ
Hyderabad Karnataka

ಶನಿವಾರ, ಸೆಪ್ಟೆಂಬರ್ 14, 2024

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಇಲ್ಲಿದೆ ʻNOCʼ ಪಡೆಯುವ ಕುರಿತು ಮುಖ್ಯ ಮಾಹಿತಿ

ರಾಜ್ಯ ಸರಕಾರಿ ನೌಕರರು ಸೇವೆ ಸಲ್ಲಿಸುತ್ತಲೇ ಬೇರೆ ಹುದ್ದೆಗೆ ನೇಮಕಾತಿ ಹೊಂದಲು ಮತ್ತು ಸದರಿ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲೇ ಸೇವೆ ಸಲ್ಲಿಸುತ್ತಿರುವ ಇಲಾಖೆಯ ಮುಖ್ಯಸ್ಥರಿಂದ NOC (No objection Certificate) ನಿರಾಕ್ಷೇಪಣಾ ಪತ್ರ ಪಡೆಯಬೇಕಾಗಿತ್ತು.ಆದರೆ ಇದೀಗ ಆ ನಿಯಮವನ್ನು ತಿದ್ದುಪಡಿ ಮಾಡಿ ಆಯ್ಕೆಯಾದ ನಂತರವೂ ಇಲಾಖೆಯಿಂದ NOC ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಯಾವುದೇ ಸೇವೆ ಅಥವಾ ಹುದ್ದೆಗೆ ಆಯ್ಕೆಯಾಗಲು ಅರ್ಜಿ ಸಲ್ಲಿಸುವ ಒಬ್ಬ ಸರ್ಕಾರಿ ನೌಕರನು ತನ್ನ ಅರ್ಜಿಯನ್ನು ನೇರವಾಗಿ ಆಯ್ಕೆ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು. ಆತನ ಆಯ್ಕೆಯನ್ನು ಅಧಿಸೂಚಿತಗೊಳಿಸಿದ ಕೂಡಲೇ, ಆತನು ಆಯ್ಕೆಯಾದ ವಾಸ್ತವಾಂಶವನ್ನು ತಾನು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯ ಇಲಾಖಾ ಮುಖ್ಯಸ್ಥರಿಗೆ ತಿಳಿಸತಕ್ಕದ್ದು ಹಾಗೂ ಆತನು ಆಯ್ಕೆಯಾದ ಹುದ್ದೆಯ ನೇಮಕಾತಿಯನ್ನು ಒಪ್ಪಿಕೊಳ್ಳಲು ಅನುವಾಗುವಂತೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡುವಂತೆ ಕೋರತಕ್ಕದ್ದು.


ಸರ್ಕಾರಿ ನೌಕರನು ಶಿಸ್ತುಕ್ರಮಕ್ಕೆ ಒಳಗೊಂಡಿದ್ದಲ್ಲಿ ಅಥವಾ ಆತ ಇಲಾಖಾ ವಿಚಾರಣೆ ಅಥವಾ ಕ್ರಿಮಿನಲ್‌ ನಡವಳಿಗಳನ್ನು ಎದುರಿಸುತ್ತಿದ್ದಲ್ಲಿ ಮತ್ತು ಸಾರ್ವಜನಿಕ ಹಿತಾಸಕ್ತಿಯ ಕಾರಣ ಅಥವಾ ಸರ್ಕಾರಿ ನೌಕರ ಮತ್ತು ಸರ್ಕಾರದ ನಡುವೆ ಮಾಡಿಕೊಳ್ಳಲಾದ ಯಾವುದೇ ನಿರ್ದಿಷ್ಟ ಒಪ್ಪಂದಕ್ಕೆ ಅಸಂಗತವಾದಂತಹ ಸಂದರ್ಭದಲ್ಲಿ ಲಿಖಿತ ರೂಪದಲ್ಲಿ ಕಾರಣಗಳನ್ನು ದಾಖಲಿಸಿ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಬಾರದೆಂದು ಇಲಾಖಾ ಮುಖ್ಯಸ್ಥರು ಪರಿಗಣಿಸಿದ ಹೊರತು, ಸಾಮಾನ್ಯವಾಗಿ ಇಲಾಖಾ ಮುಖ್ಯಸ್ಥರು ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡತಕ್ಕದ್ದು, ಸಾಧ್ಯವಾದಷ್ಟು ಬೇಗನೆ ಆದರೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಕೋರಿ ಇಲಾಖಾ ಮುಖ್ಯಸ್ಥರಿಗೆ ಸಲ್ಲಿಸಿದ ಅರ್ಜಿಯ ದಿನಾಂಕದ ಮೂವತ್ತು ದಿನಗಳ ಅವಧಿಯ ಒಳಗಾಗಿ ಇಲಾಖಾ ಮುಖ್ಯಸ್ಥರು ಈ ಬಗ್ಗೆ ನಿರ್ಣಯವನ್ನು ತೆಗೆದುಕೊಳ್ಳತಕ್ಕದ್ದು ಹಾಗೂ ಅದನ್ನು ಸಂಬಂಧಿತ ಸರ್ಕಾರಿ ನೌಕರ ಮತ್ತು ಆಯ್ಕೆ ಪ್ರಾಧಿಕಾರ ಮತ್ತು ಉಪ-ನಿಯಮ (1)ರಲ್ಲಿ ಉಲ್ಲೇಖಿಸಲಾದ ಹುದ್ದೆಗೆ ನೇಮಕಾತಿ ಮಾಡುವ ಸಕ್ಷಮ ಪ್ರಾಧಿಕಾರಕ್ಕೆ ತಿಳಿಸತಕ್ಕದ್ದು ಹಾಗೂ ಆ ರೀತಿ ಮಾಡಲು ವಿಫಲವಾದಲ್ಲಿ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಲಾಗಿದೆ ಎಂದು ಪರಿಗಣಿತಗೊಳ್ಳತಕ್ಕದ್ದು.

PPF Calculator: ಪ್ರತಿ ತಿಂಗಳು 2000, 3000, 4000 ಮತ್ತು 5000 ರೂ. ಹೂಡಿಕೆ ಮಾಡಿದ್ರೆ 15 ವರ್ಷಕ್ಕೆ ಎಷ್ಟು ಹಣ ನಿಮ್ಮ ಕೈ ಸೇರುತ್ತೆ ನೋಡಿ..

PPF Calculator: ಪ್ರತಿ ತಿಂಗಳು 2000, 3000, 4000 ಮತ್ತು 5000 ರೂ. ಹೂಡಿಕೆ ಮಾಡಿದ್ರೆ 15 ವರ್ಷಕ್ಕೆ ಎಷ್ಟು ಹಣ ನಿಮ್ಮ ಕೈ ಸೇರುತ್ತೆ ನೋಡಿ.. ಈ ಪೈಕಿ ಸಾರ್ವಜನಿಕ ...