ರಾಜ್ಯ ಸರ್ಕಾರಿ ನೌಕರರಿಗೆ ಗೃಹನಿರ್ಮಾಣ ಮುಂಗಡವನ್ನು 'ಎ' ವೃಂದಕ್ಕೆ 65.00 ಲಕ್ಷ ಮತ್ತು ಇತರೆ ವೃಂದದ ನೌಕರರಿಗೆ ರೂ. 40.00 ಲಕ್ಷಗಳಿಗೆ ಹೆಚ್ಚಳ ಮಾಡಲಾಗಿದ್ದು, ನಾಲ್ಕು ಚಕ್ರ ವಾಹನ ಖರೀದಿ ಮುಂಡವನ್ನು ರೂ. 3.00 ಲಕ್ಷದಿಂದ ರೂ. 6.00 ಲಕ್ಷಕ್ಕೆ ಹಾಗೂ ದ್ವಿ-ಚಕ್ರ ವಾಹನಕ್ಕೆ ರೂ. 50,000-00 ರಿಂದ ರೂ. 80,000-00 ಗಳಿಗೆ ಹೆಚ್ಚಳ ಮಾಡಲಾಗಿದೆ.
ಹೀಗಿದೆ 7 ನೇ ವೇತನ ಆಯೋಗದ ಪ್ರಮುಖ ಶಿಫಾರಸ್ಸುಗಳು
* ದಿನಾಂಕ: 01-07-2022ಕ್ಕೆ ಇದ್ದಂತಹ ಶೇ. 31% ತುಟ್ಟಿಭತ್ಯೆ ವಿಲೀನ ಹಾಗೂ ಮೇಲಿನ 27.50 ರಷ್ಟು ಸೇರಿ ಒಟ್ಟು ಶೇ. 58.50ರಷ್ಟು ಮೂಲ ವೇತನದಲ್ಲಿ ಹೆಚ್ಚಳ.
* 5. 17,000-00 205 27,000-00 ಕ್ಕೆ ಹಾಗೂ ಗರಿಷ್ಠ 2. 2,41,200-00 ៨ម. 5. 1,04.600-00 00
* ಸರ್ಕಾರಿ ನೌಕರರಿಗೆ ಹೊಸ ವೇತನ ಶ್ರೇಣಿ ಹಾಗೂ ಫಿಟ್ಮೆಂಟ್ ಸೌಲಭ್ಯವನ್ನು ದಿ: 01-07-2022 ರಿಂದ ಕಾಲ್ಪನಿಕವಾಗಿ ಅನುಷ್ಠಾನಗೊಳಿಸಲು ಶಿಫಾರಸ್ಸು.
* ವಾರ್ಷಿಕ ವೇತನ ಬಡ್ತಿ ದರವನ್ನು ಕನಿಷ್ಠ ರೂ.400-00 ರಿಂದ ರೂ. 650-00 ಕ್ಕೆ ಹಾಗೂ ಗರಿಷ್ಠ ರೂ. 3100-00 ರಿಂದ ರೂ. 5,000-00ಕ್ಕೆ ಹೆಚ್ಚಳ.
* ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ದಿನಾಂಕ: 01-07-2022 ರಿಂದ ಭಾರತ ಸರ್ಕಾರವು ಮಂಜೂರು ಮಾಡಿದ ಪ್ರತಿ ಶೇ.1 ರಷ್ಟು ತುಟ್ಟಿಭತ್ಯೆಗೆ ಶೇ. 0.722ರಷ್ಟು ನೀಡುವುದು.
* ಭಾರತ ಸರ್ಕಾರವು ತನ್ನ ನೌಕರರಿಗೆ ಮುಂದೆ ವೇತನ ಪರಿಷ್ಕರಿಸಿದಾಗ ಕೇಂದ್ರ ವೇತನ ರಚನೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಕೇಂದ್ರ ಮಾದರಿಯ ವೇತನ ನೀಡಲು ಶಿಫಾರಸ್ಸು ಮಾಡಿದೆ.
'ಸಿ' ಮತ್ತು 'ಡಿ' ವೃಂದದ ನೌಕರರಿಗೆ ಹಾಲಿ ಇರುವ ಜಿ.ಐ.ಎಸ್. ಮಾಸಿಕ ಶೇ. 100% ಕ್ಕೆ ಹೆಚ್ಚಳ ಮತ್ತು ಗ್ರೂಪ್ 'ಎ' ಮತ್ತು 'ಬಿ' ವೃಂದಕ್ಕೆ ಅನಾನೇ, 50%ಕ್ಕೆ ಹೆಚ್ಚಿಸಲು ಶಿಫಾರಸ್ಸು.
ಹೆಚ್ಚಳವಾಗುವ ಮೂಲ ವೇತನಕ್ಕೆ ಮನೆ ಬಾಡಿಗೆ ಭತ್ಯೆಗಳನ್ನು ಕ್ರಮವಾಗಿ 'ಎ' ವರ್ಗದ ನಗರಗಳಿಗೆ ಶೇ.20%, 'ಬಿ' ವರ್ಗದ ನಗರಗಳಿಗೆ ಶೇ.15%, 'ಸಿ' ವರ್ಗದ ಪ್ರದೇಶಗಳಿಗೆ ಶೇ.7.5% ಶಿಫಾರಸ್ಸು.
* ಪರಿಷ್ಕರಣೆಯಿಂದ ಹೆಚ್ಚಳವಾಗುವ ಮೂಲ ವೇತನಕ್ಕೆ ನಗರ ಪರಿಹಾರ ಭತ್ಯೆಗಳನ್ನು ಕ್ರಮವಾಗಿ " ಮತ್ತು 'ಬಿ' ವೃಂದದ ನೌಕರರಿಗೆ ರೂ. 600-00 ರಿಂದ ರೂ. 900-00ಕ್ಕೆ ಮತ್ತು 'ಸಿ ಮತ್ತು 'ಡಿ' ವೃಂದದ ನೌಕರರಿಗೆ ರೂ. 500-00 ರಿಂದ 5. 750-00
* ಸಮವಸ್ತ್ರ ಭತ್ಯೆ, ನಿಗದಿತ ಪ್ರಯಾಣ ಭತ್ಯೆ, ಸಾಗಣೆ ಭತ್ಯೆ, ದಿನಭತ್ಯೆ ಮತ್ತು ವರ್ಗಾವಣೆ ಅನುದಾನವನ್ನು ಹಾಲಿ ಇರುವ ದರಗಳಿಗೆ ಶೇ.25% ಹೆಚ್ಚಳ.
* ವಿಕಲಚೇತನ ನೌಕರರಿಗೆ ಹಲವಾರು ಭತ್ಯೆಗಳು ಮತ್ತು ಸೌಲಭ್ಯಗಳನ್ನು ಹೆಚ್ಚಳಕ್ಕೆ ಶಿಫಾರಸ್ಸು.
* ವಿಶೇಷಚೇತನ ಮಕ್ಕಳ ಶೈಕ್ಷಣಿಕ ಭತ್ಯೆಯನ್ನು ಪ್ರತಿ ತಿಂಗಳು ರೂ. 1000-00 ರಿಂದ
ರೂ. 2000-00ಕ್ಕೆ ಹೆಚ್ಚಳಕ್ಕೆ ಶಿಫಾರಸ್ಸು.
* ನಾಲ್ಕು ಚಕ್ರ ವಾಹನ ಖರೀದಿ ಮುಂಡವನ್ನು ರೂ. 3.00 ಲಕ್ಷದಿಂದ ರೂ. 6.00 ಲಕ್ಷಕ್ಕೆ ಹಾಗೂ ದ್ವಿ-ಚಕ್ರ ವಾಹನಕ್ಕೆ ರೂ. 50,000-00 ರಿಂದ ರೂ. 80,000-00 ಗಳಿಗೆ ಹೆಚ್ಚಳ.
* ಗೃಹನಿರ್ಮಾಣ ಮುಂಗಡವನ್ನು 'ಎ' ವೃಂದಕ್ಕೆ 65.00 ಲಕ್ಷ ಮತ್ತು ಇತರೆ ವೃಂದದ ನೌಕರರಿಗೆ ರೂ. 40.00 ಲಕ್ಷಗಳಿಗೆ ಹೆಚ್ಚಳ.
* ನೌಕರರ ಸೇವಾವಧಿಯಲ್ಲಿ ಮೂರು ಭಾರಿ ಎಲ್.ಟಿ.ಸಿ. ಸೌಲಭ್ಯಕ್ಕೆ ಅವಕಾಶ.
* ಗ್ರೂಪ್ 'ಡಿ' ಮತ್ತು 'ಸಿ' ವೃಂದದ ನೌಕರರಿಗೆ ಹಾಲಿ ಇದ್ದಂತಹ ವೈದ್ಯಕೀಯ ಭತ್ಯೆ 5. 200-00 2 5. 500-00 ರೂ..
* ಸರ್ಕಾರಿ ನೌಕರರ ಅವಲಂಬಿತ ಕುಟುಂಬ ಸದಸ್ಯರು ಅನಾರೋಗ್ಯದ ಸಂದರ್ಭದಲ್ಲಿ ಆರೈಕೆ ಮಾಡಲು ಶೇ. 50% ವೇತನದೊಂದಿಗೆ 180 ದಿನಗಳ 'ಆರೈಕೆ ರಜೆ' ಎಂಬ ಹೊಸ ಯೋಜನೆಗೆ ಶಿಫಾರಸ್ಸು ಮಾಡಿದೆ.
* ಸರ್ಕಾರಿ ಸೇವೆಗೆ ಸೇರುವ 2 ತಿಂಗಳ ಮೊದಲು ಮಗುವಿಗೆ ಜನ್ಮ ನೀಡಿದ ಮಹಿಳಾ ಸರ್ಕಾರಿ ನೌಕರರಿಗೆ ನವಜಾತ ಶಿಶುವಿನ ಆರೈಕೆಗಾಗಿ 18 ವಾರಗಳ ಹೆರಿಗೆ ರಜೆಗೆ ಶಿಫಾರಸ್ಸು ಮಾಡಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ