ಹೈದರಾಬಾದ್ ಕರ್ನಾಟಕ ಪ್ರದೇಶ

ಹೈದರಾಬಾದ್ ಕರ್ನಾಟಕ ಪ್ರದೇಶ
Hyderabad Karnataka

ಗುರುವಾರ, ಡಿಸೆಂಬರ್ 19, 2024

SBIನಲ್ಲಿ ಖಾಲಿ ಇರುವ 13,735 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

SBIನಲ್ಲಿ ಖಾಲಿ ಇರುವ 13,735 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!


 ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI- State Bank Of India) ಕ್ಲರ್ಕ್ ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ (Official website) sbi.co.in ನಲ್ಲಿ ಪರಿಶೀಲನೆ ಮಾಡಬಹುದು.


ಹುದ್ದೆಗಳ ವಿವರ :

* ನೇಮಕಾತಿ ಮಾಡಬೇಕಾದ ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ


* ಹುದ್ದೆ ಹೆಸರು : ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್‌ ಮತ್ತು ಸೇಲ್ಸ್‌) Junior Associate (Customer Support & Sales)


* ವೇತನ ಶ್ರೇಣಿ : ಮಾಸಿಕ ಆರಂಭಿಕ ವೇತನ ರೂ 26730 /-


* ಕರ್ನಾಟಕದಲ್ಲಿ ಜೂನಿಯರ್ ಅಸೋಸಿಯೇಟ್ಸ್‌ ಹುದ್ದೆಗಳು : 50


* ಒಟ್ಟು ಹುದ್ದೆಗಳ ಸಂಖ್ಯೆ : 13,735


ಶೈಕ್ಷಣಿಕ ಅರ್ಹತೆ :

* ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ (Any equivalent qualification recognized by Central Govt) ಪಡೆದಿರಬೇಕು.


* ತಾವು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆಯನ್ನು ಅಭ್ಯರ್ಥಿಗಳು ಬಲ್ಲವರಾಗಿರಬೇಕು.


ಆಯ್ಕೆ ಪ್ರಕ್ರಿಯೆ :

* ಪೂರ್ವಭಾವಿ ಪರೀಕ್ಷೆ/ ಮುಖ್ಯ ಪರೀಕ್ಷೆ ಹಾಗೂ ಭಾಷಾ ಪ್ರಾವಿಣ್ಯತೆ (Language proficiency) ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.


* ಪೂರ್ವಭಾವಿ ಪರೀಕ್ಷೆಯು‌ (Preliminary examination) 100 ಅಂಕಗಳಿಗೆ ವಸ್ತುನಿಷ್ಠ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.


* ಪರೀಕ್ಷೆಯನ್ನು ಆನ್‌ಲೈನ್‌ನಲ್ಲಿ (online) ನಡೆಸಲಾಗುವುದು.

ವಯಸ್ಸಿನ ಮಿತಿ :

ಅಭ್ಯರ್ಥಿಯ ವಯಸ್ಸಿನ ಮಿತಿಯು 01.04.2024 ರಂತೆ 20 ವರ್ಷಗಳಿಗಿಂತ ಕಡಿಮೆ ಮತ್ತು 28 ವರ್ಷಕ್ಕಿಂತ ಹೆಚ್ಚಿರಬಾರದು.


ಅರ್ಜಿ ಶುಲ್ಕ :

* ಸಾಮಾನ್ಯ/ OBC/ EWS : ₹ 750/-

* ಪರಿಶಿಷ್ಟ ಜಾತಿ ಹಾಗೂ ಪಂಗಡ, ಅಂಗವಿಕಲ ವರ್ಗ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.


ಅಪ್ಲಿಕೇಶನ್‌ನ ಕೊನೆಯ ದಿನಾಂಕ : ಜನವರಿ 7, 2025


ಕಾಮೆಂಟ್‌ಗಳಿಲ್ಲ:

'ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ : 'ಆರೋಗ್ಯ ಸಂಜೀವಿನಿ' ಯೋಜನೆಯಡಿ ನೋಂದಣಿ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದಿದ್ದಾರೆ. ಈ ಯೋಜನೆಯ ಕಾರ್ಯನೀತಿ ಸೂಚನೆಗಳನ್ನು ಸರ್ಕಾರದ ಆದೇಶ ಸಂಖ್ಯೆ:ಸಿಆಸು...