ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 6 ಫೆಬ್ರವರಿ ಆಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.
ಅಕೌಂಟೆಂಟ್, ಸ್ಟೆನೋಗ್ರಾಫರ್ ಗ್ರೇಡ್-I, ಲೋಬರ್ ಡಿವಿಷನ್ ಕ್ಲರ್ಕ್ ಸೇರಿದಂತೆ ಒಟ್ಟು 113 ಹುದ್ದೆಗಳು ಖಾಲಿ ಇದ್ದು, ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ,ವಿದ್ಯಾರ್ಹತೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ವಿದ್ಯಾರ್ಹತೆ
ಅಧಿಸೂಚನೆಯ ಪ್ರಕಾರ 10ನೇ ತರಗತಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಎಚ್ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಯಾವುದೇ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ವೇತನ
ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 18,000 ರೂ. - 92,300 ರೂ. ಮಾಸಿಕ ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://mod.gov.in/)
ಹೆಸರು ನೋಂದಾಯಿಸಿ.
ಎಚ್ಚರಿಕೆಯಿಂದ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
ಅಗತ್ಯ ಡಾಕ್ಯುಮೆಂಟ್, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್ ಮಾಡಿ.
ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಅರೋಗ್ಯ & ಜೀವನ ಶೈಲಿ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ