ಹೈದರಾಬಾದ್ ಕರ್ನಾಟಕ ಪ್ರದೇಶ

ಹೈದರಾಬಾದ್ ಕರ್ನಾಟಕ ಪ್ರದೇಶ
Hyderabad Karnataka

ಗುರುವಾರ, ಮಾರ್ಚ್ 27, 2025

Government Employee: ಸಂಬಳ ಪ್ಯಾಕೇಜ್ ಖಾತೆ ಕಡ್ಡಾಯ, ಸರ್ಕಾರಿ ನೌಕರರ ಬೇಡಿಕೆಗಳು

'ಸಂಬಳ ಪ್ಯಾಕೇಜ್ ಖಾತೆಯನ್ನು ತೆರೆಯುವ ಸರ್ಕಾರಿ ನೌಕರರು ಸರ್ಕಾರದ ಮುಂದೆ ಹಲವು ಬೇಡಿಕೆಯನ್ನು ಇಟ್ಟಿದ್ದಾರೆ. ಇದಕ್ಕಾಗಿ ಬ್ಯಾಂಕ್‌ಗಳ ಜೊತೆ ಸಭೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಸರ್ಕಾರದ ಕಾರ್ಯದರ್ಶಿಗಳು, (ವಿತ್ತೀಯ ಸುಧಾರಣೆ) ಆರ್ಥಿಕ ಇಲಾಖೆ ಇವರಿಗೆ ಪತ್ರವನ್ನು ಬರೆದಿದ್ದಾರೆ. ಕರ್ನಾಟಕ ಸರ್ಕಾರ ಬ್ಯಾಂಕುಗಳ ಜೊತೆ ಸಭೆಯನ್ನು ಆಯೋಜಿಸಬೇಕು, ನೌಕರರ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ಸರ್ಕಾರಿ ನೌಕರರ ಬೇಡಿಕೆಗಳೇನು?: ಸರ್ಕಾರಿ ನೌಕರರ ಸಂಘದ ಪತ್ರವು ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್‌ ಖಾತೆಯಡಿ ಬ್ಯಾಂಕ್‌ಗಳು ನೀಡುತ್ತಿರುವ ಸೌಲಭ್ಯಗಳ ಜೊತೆಗೆ ಗೃಹ ಸಾಲ, ವೈಯಕ್ತಿಕ ಸಾಲಗಳನ್ನು ಕಡಿಮೆ ಬಡ್ಡಿ ದರದಲ್ಲಿ ನೀಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಪತ್ರದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯ ಸಚಿವ ಸಂಪುಟದ ತೀರ್ಮಾನದಂತೆ ರಾಜ್ಯ ಸರ್ಕಾರಿ ನೌಕರರು ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ವಿವಿಧ ಬ್ಯಾಂಕುಗಳು ಒದಗಿಸುವ ವಿಶಿಷ್ಟ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುವಂತೆ ಸಂಬಳ ಪ್ಯಾಕೇಜ್‌ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ ನೌಕರರಿಗೆ ಕಡ್ಡಾಯಗೊಳಿಸಲಾಗಿದೆ, ಇದು ಸ್ವಾಗತಾರ್ಹ.

ಮುಂದುವರೆದು, ಸಂಬಳ ಪ್ಯಾಕೇಜ್ ಖಾತೆಯಾಗಿ ಪರಿವರ್ತಿಸಿಕೊಳ್ಳುವ ಅಧಿಕಾರಿ/ ನೌಕರರಿಗೆ ಈ ಕೆಳಕಂಡ ಸಾಲಗಳನ್ನು ಕಡಿಮೆ ಬಡ್ಡಿ ದರದಲ್ಲಿ ನೀಡುವ ಸಂಬಂಧ ಚರ್ಚಿಸಲು ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‌ಗಳ ಮುಖ್ಯಸ್ಥರೊಂದಿಗೆ ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ಏರ್ಪಡಿಸಲು ತಮ್ಮಲ್ಲಿ ಕೋರಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಗೃಹ ಸಾಲ, ವೈಯಕ್ತಿಕ ಸಾಲ ಮತ್ತು ವಾಹನ ಖರೀದಿ ಸಾಲದ ಮೇಲೆ ಕಡಿಮೆ ಬಡ್ಡಿದರಗಳನ್ನು ನೀಡಬೇಕು ಎಂದು ಪತ್ರದಲ್ಲಿ ಬೇಡಿಕೆ ಸಲ್ಲಿಕೆ ಮಾಡಲಾಗಿದೆ. ಸರ್ಕಾರ ಬ್ಯಾಂಕುಗಳ ಜೊತೆ ಯಾವಾಗ ಸಭೆಯನ್ನು ಕರೆಯಲಿದೆ ಎಂದು ಕಾದು ನೋಡಬೇಕಿದೆ.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಕಲಾಪದಲ್ಲಿ ಸರ್ಕಾರಿ ನೌಕರರ ಸಂಬಳ ಪ್ಯಾಕೇಜ್ ಕುರಿತು ಮಾಹಿತಿಯನ್ನು ನೀಡಿದ್ದರು. ಸರ್ಕಾರಿ ನೌಕರರ ಸಾಮಾಜಿಕ ಭದ್ರತೆಯು ಸರ್ಕಾರದ ಪ್ರಮುಖ ವಿಷಯವಾಗಿದ್ದು, ಈ ಕುರಿತು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಮುಂದಿನ ಮೂರು ತಿಂಗಳಿನಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿ/ ನೌಕರರು ಸಂಬಳ ಪ್ಯಾಕೇಜ್ ಖಾತೆ ಕಡ್ಡಾಯವಾಗಿ ತೆರೆಯಬೇಕು ಎಂದು ಸೂಚನೆ ನೀಡಲಾಗಿತ್ತು.

ಸಂಬಳ ಪ್ಯಾಕೇಜ್ ಖಾತೆ ತೆರೆಯುವ ಸರ್ಕಾರಿ ನೌಕರ/ ಅಧಿಕಾರಿಗಳಿಗೆ ಬ್ಯಾಂಕುಗಳು ವಿವಿಧ ಸೌಲಭ್ಯವನ್ನು ನೀಡಲಿವೆ. ಸರ್ಕಾರದ ಎಲ್ಲಾ ನೌಕರರು/ ಅಧಿಕಾರಿಗಳು ಬ್ಯಾಂಕ್ ಮತ್ತು ಅಂಚೆ ಕಛೇರಿಗಳಲ್ಲಿ 'ಸಂಬಳ ಪ್ಯಾಕೇಜ್ ಖಾತೆ' ಕಡ್ಡಾಯವಾಗಿ ತೆರೆಯಬೇಕು. ಎಲ್ಲರೂ ಖಾತೆ ತೆರೆಯುವ ಕುರಿತು ಇಲಾಖೆಗಳ ಮುಖ್ಯಸ್ಥರು ಸಹ ನೋಡಿಕೊಳ್ಳಬೇಕು ಎಂದು ಆರ್ಥಿಕ ಇಲಾಖೆ ಆದೇಶದಲ್ಲಿ ತಿಳಿಸಿತ್ತು.

ವಿವಿಧ ಬ್ಯಾಂಕ್‌ಗಳು ಈಗಾಗಲೇ ಸಂಬಳ ಪ್ಯಾಕೇಜ್ ಖಾತೆಯ ಅಡಿಯಲ್ಲಿ ನೀಡುವ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡಿವೆ. ಸಂಬಳ ಪ್ಯಾಕೇಜ್‌ಗಳ ಅಡಿಯಲ್ಲಿ ಎಲ್ಲಾ ನೌಕರರು. (ಖಾಯಂ/ ಗುತ್ತಿಗೆ/ ಹೊರಗುತ್ತಿಗೆ ಇತ್ಯಾದಿ) ಖಾತೆಗಳನ್ನು ತೆರೆಯಲು/ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಕಾಮೆಂಟ್‌ಗಳಿಲ್ಲ:

ರಾಜ್ಯ ಸರ್ಕಾರಿ ನೌಕರ'ರಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾದ ಸರ್ಕಾರ

ಈ ಸಂಬಂಧ ರಾಜ್ಯ ಸರ್ಕಾರದಿಂದ ಸಭಾ ಸೂಚನಾ ಪತ್ರವನ್ನು ಹೊರಡಿಸಲಾಗಿದ್ದು, ರಾಜ್ಯ ಸಚಿವ ಸಂಪುಟದ ತೀರ್ಮಾನಿಸಿದಂತೆ ಅಧಿಕಾರಿ, ನೌಕರರು ಮತ್ತು ಅವಲಂಬಿತ ಕುಟುಂಬದ ಸದಸ್ಯರ ಹ...