ಹೈದರಾಬಾದ್ ಕರ್ನಾಟಕ ಪ್ರದೇಶ

ಹೈದರಾಬಾದ್ ಕರ್ನಾಟಕ ಪ್ರದೇಶ
Hyderabad Karnataka

ಗುರುವಾರ, ಏಪ್ರಿಲ್ 3, 2025

`ರಾಜ್ಯ ಸರ್ಕಾರಿ ನೌಕರರೇ' ಗಮನಿಸಿ : `ಸರ್ವೋತ್ತಮ ಸೇವಾ ಪ್ರಶಸ್ತಿ'ಗೆ ಅರ್ಜಿ ಆಹ್ವಾನ | Govt Employees

ಮುಂದುವರೆದು, ಸದರಿ ಸುತ್ತೋಲೆಯನ್ನು ಭಾಗಶ: ಪರಿಷ್ಕರಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಕ್ರಮವಹಿಸುವಂತೆ ತಿಳಿಸಲಾಗಿದೆ.

1. 2024ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು 2023ನೇ ಕ್ಯಾಲೆಂಡರ್ ವರ್ಷದಲ್ಲಿ ಮಾಡಿರುವ ಉಪ ಕ್ರಮ /ಸಾಧನೆಯನ್ನು ಪರಿಗಣಿಸಲಾಗುವುದು. ಹಾಗೆಯೇ, 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು 2024ನೇ ಕ್ಯಾಲೆಂಡರ್ ವರ್ಷದಲ್ಲಿ ಮಾಡಿರುವ ಉಪ ಕ್ರಮ /ಸಾಧನೆಯನ್ನು ಪರಿಗಣಿಸಲಾಗುವುದು.

2. 2024 ಹಾಗೂ 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆನ್‌ಲೈನ್‌ನಲ್ಲಿ ನಾಮ ನಿರ್ದೇಶನವನ್ನು ಸಲ್ಲಿಸಲು ದಿನಾಂಕ: 14-04-2025 ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ನಂತರ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ.

3. 2023ನೇ ಸಾಲಿನಲ್ಲಿ ಯಾವ ಜಿಲ್ಲೆಗಳು ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿಲ್ಲವೋ ಅವರೂ ಸಹ ಪ್ರಕ್ರಿಯೆಯನ್ನು ದಿನಾಂಕ: 16-04-2025 ರೊಳಗೆ ಪೂರ್ಣಗೊಳಿಸುವುದು ಮತ್ತು ಆಯ್ಕೆ ಪೂರ್ಣಗೊಂಡ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸುವುದು.

4. 2024 ಹಾಗೂ 2025ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯ ಆಯ್ಕೆಯನ್ನು ಪೂರ್ಣಗೊಳಿಸಿ, ಪೂರ್ಣಗೊಂಡ ಎರಡು ವರ್ಷಗಳ ಆಯ್ಕೆ ಪಟ್ಟಿಯನ್ನು ದಿನಾಂಕ: 16-04-2025ರೊಳಗೆ ಸರ್ಕಾರಕ್ಕೆ ಸಲ್ಲಿಸುವುದು.

5. 2024 ಹಾಗೂ 2025ನೇ ಸಾಲಿನ ಎರಡು ವರ್ಷಗಳಿಗೆ ಪ್ರತಿ ವರ್ಷಕ್ಕೆ ತಲಾ ಇಬ್ಬರಂತೆ ಒಟ್ಟು 4 ಜನ ಅರ್ಹ ಅಧಿಕಾರಿ / ನೌಕರರನ್ನು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಪರಿಗಣಿಸಲು ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ನಾಮ ನಿರ್ದೇಶನಗಳನ್ನು ಸೂಕ್ತ ಶಿಫಾರಸ್ಸಿನೊಂದಿಗೆ ದಿನಾಂಕ: 16-04-2025 ರೊಳಗೆ ಸರ್ಕಾರಕ್ಕೆ ವಿಳಂಬವಿಲ್ಲದೇ ನಿಗದಿತ ನಮೂನೆಯಲ್ಲಿ ಕಡ್ಡಾಯವಾಗಿ ಸಲ್ಲಿಸುವುದು.


ಕಾಮೆಂಟ್‌ಗಳಿಲ್ಲ:

ರಾಜ್ಯ ಸರ್ಕಾರಿ ನೌಕರ'ರಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾದ ಸರ್ಕಾರ

ಈ ಸಂಬಂಧ ರಾಜ್ಯ ಸರ್ಕಾರದಿಂದ ಸಭಾ ಸೂಚನಾ ಪತ್ರವನ್ನು ಹೊರಡಿಸಲಾಗಿದ್ದು, ರಾಜ್ಯ ಸಚಿವ ಸಂಪುಟದ ತೀರ್ಮಾನಿಸಿದಂತೆ ಅಧಿಕಾರಿ, ನೌಕರರು ಮತ್ತು ಅವಲಂಬಿತ ಕುಟುಂಬದ ಸದಸ್ಯರ ಹ...