ಹೈದರಾಬಾದ್ ಕರ್ನಾಟಕ ಪ್ರದೇಶ

ಹೈದರಾಬಾದ್ ಕರ್ನಾಟಕ ಪ್ರದೇಶ
Hyderabad Karnataka

ಬುಧವಾರ, ಮೇ 21, 2025

8th pay commission

ವೇತನ ಆಯೋಗಗಳಲ್ಲಿ ಫಿಟ್‌ಮೆಂಟ್ ಅಂಶವು ನಿರ್ಣಾಯಕ ಪಾತ್ರ ವಹಿಸುತ್ತದೆ. ಎಲ್ಲಾ ಹಂತಗಳಲ್ಲಿ ಪರಿಷ್ಕೃತ ವೇತನ ಮತ್ತು ಪಿಂಚಣಿಗಳನ್ನು ಲೆಕ್ಕಾಚಾರ ಮಾಡಲು ಇದು ಸಾಮಾನ್ಯ ಗುಣಕವಾಗಿದೆ. ಇದು ಎಲ್ಲಾ ಉದ್ಯೋಗಿ ಶ್ರೇಣಿಗಳು ಮತ್ತು ವೇತನ ಬ್ಯಾಂಡ್‌ಗಳಲ್ಲಿ ಸ್ಥಿರವಾದ ವೇತನ ಹೆಚ್ಚಳವನ್ನು ಖಾತರಿಪಡಿಸುತ್ತದೆ.ಭಾರತಕ್ಕೆ ಹೆಚ್ಚು ಹಾನಿ ಮಾಡಲ್ಲ ಅಮೆರಿಕದ ಸುಂಕಗಳು: ಪಾಕ್ ನೊಂದಿಗೆ ಉದ್ವಿಗ್ನತೆಯಿಂದ ದೇಶದ ಆರ್ಥಿಕತೆ ಮೇಲೆ ಬೀರೋ ಪರಿಣಾಮವೇನು..?

ಫಿಟ್‌ಮೆಂಟ್ ಅಂಶದ ಪರಿಣಾಮಗಳು ಹೆಚ್ಚಳದ ಮೇಲೆ ಹೇಗೆ ಪರಿಣಾಮ ಬೀರುತ್ತವೆ..

ಫಿಟ್‌ಮೆಂಟ್ ಅಂಶವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು, ಮೊದಲಿಗೆ 7ನೇ ವೇತನ ಆಯೋಗವನ್ನು ನೋಡಬೇಕು. ಇದರಲ್ಲಿ 2.57 ಫಿಟ್‌ಮೆಂಟ್ ಅಂಶವಿತ್ತು. ಅಂದರೆ ಕನಿಷ್ಠ ಮೂಲ ವೇತನ 7,000 ರೂ. ಇದ್ದದ್ದು ರೂ. 18,000 ಕ್ಕೆ ಅರ್ಥಾತ್ 2.57 ಪಟ್ಟು ಹೆಚ್ಚಾಗಿತ್ತು. ಹಾಗೆ, ಪಿಂಚಣಿಗಳು ಸಹ ರೂ. 3,500 ರಿಂದ ರೂ. 9,000 ಕ್ಕೆ ಪ್ರಮುಖ ಪರಿಷ್ಕರಣೆಯನ್ನು ಕಂಡವು. ಇನ್ನು, 8ನೇ ವೇತನ ಆಯೋಗದಲ್ಲಿ ಸಂಬಳ ಹೆಚ್ಚಳಕ್ಕೆ ರಾಷ್ಟ್ರೀಯ ಮಂಡಳಿ ಜಂಟಿ ಸಲಹಾ ಯಂತ್ರೋಪಕರಣಗಳ (NC JCM) ಸಿಬ್ಬಂದಿ ವಿಭಾಗವು 2.57 ಕ್ಕಿಂತ ಹೆಚ್ಚಿನ ಫಿಟ್‌ಮೆಂಟ್ ಅಂಶವನ್ನು ಕೇಳಿದೆ ಎಂದು ಹಲವು ವರದಿಗಳು ಹೇಳುತ್ತಿದೆ.

ITR Filing without Form 16: ಫಾರ್ಮ್ 16 ಇಲ್ಲದೆ ಐಟಿಆರ್ ಸಲ್ಲಿಸುವುದು ಹೇಗೆ..? ವಿವರ ಇಲ್ಲಿದೆ..

ಫಿಟ್‌ಮೆಂಟ್ ಅಂಶವನ್ನು ಬಳಸಿಕೊಂಡು ಸಂಬಳ ಹೆಚ್ಚಳ ಲೆಕ್ಕ ಹಾಕೋದು ಹೇಗೆ..

8ನೇ ವೇತನ ಆಯೋಗದ ಅಡಿಯಲ್ಲಿ ಸಂಭಾವ್ಯ ವೇತನ ಹೆಚ್ಚಳವನ್ನು ಅಂದಾಜು ಮಾಡಲು, ಈ ಕೆಳಗಿನ ಉದಾಹರಣೆಯನ್ನು ಪರಿಗಣಿಸಿ:

  • ಪ್ರಸ್ತುತ ಮೂಲ ವೇತನ: ರೂ 40,000/ತಿಂಗಳು
  • ಫಿಟ್‌ಮೆಂಟ್ ಅಂಶ (8ನೇ ವೇತನ ಆಯೋಗ): 2.5 (ಊಹಾತ್ಮಕ)
  • ಪರಿಷ್ಕೃತ ಮೂಲ ವೇತನ: ರೂ 40,000 × 2.5 = ರೂ 1,00,000/ತಿಂಗಳು

ಮೊದಲೇ, ತಿಳಿಸಿದಂತೆ ಇದು ಊಹಾತ್ಮಕ ಆಗಿದ್ದು, 8ನೇ ವೇತನ ಆಯೋಗವು ಅಧಿಕೃತವಾಗಿ ತನ್ನ ಶಿಫಾರಸುಗಳನ್ನು ಬಿಡುಗಡೆ ಮಾಡಿದ ನಂತರ ನಿಜವಾದ ಫಿಟ್‌ಮೆಂಟ್ ಅಂಶವನ್ನು ದೃಢೀಕರಿಸಲಾಗುತ್ತದೆ.

8ನೇ ವೇತನ ಆಯೋಗದಿಂದ ಏನನ್ನು ನಿರೀಕ್ಷಿಸಬಹುದು..

ನೌಕರರ ಸಂಘಗಳು ಪ್ರಸ್ತಾಪಿಸಿದ ಬೇಡಿಕೆಗಳನ್ನು ಸರ್ಕಾರ ಸಂಪೂರ್ಣವಾಗಿ ಸ್ವೀಕರಿಸದಿರಬಹುದು ಎಂದು ತಜ್ಞರು ಅಂದಾಜಿಸುತ್ತಾರೆ. ಮಾಜಿ ಹಣಕಾಸು ಕಾರ್ಯದರ್ಶಿ ಸುಭಾಷ್ ಚಂದ್ರ ಗಾರ್ಗ್ ಅವರನ್ನು ಉಲ್ಲೇಖಿಸಿ ಫೈನಾನ್ಷಿಯಲ್ ಎಕ್ಸ್‌ಪ್ರೆಸ್ ವರದಿಯು ಹೆಚ್ಚು ಸಾಧಾರಣ ಫಿಟ್‌ಮೆಂಟ್ ಅಂಶವನ್ನು ಸೂಚಿಸಿದೆ, ಬಹುಶಃ ಸುಮಾರು 1.92.ಆದರೂ, ಒಂದು ವೇಳೆ ವ್ಯಾಪಕವಾಗಿ ಊಹಿಸಲಾದ 2.5 ಗೆ ಹತ್ತಿರದಲ್ಲಿ ಫಿಟ್‌ಮೆಂಟ್ ಅಂಶವನ್ನು ಹೊಂದಿಸಿದರೆ, ಅದರಿಂದ ಸಂಬಳ ಮತ್ತು ಪಿಂಚಣಿ ಎರಡರಲ್ಲೂ ಗಣನೀಯ ಹೆಚ್ಚಳಕ್ಕೆ ಕಾರಣವಾಗಬಹುದು. ಉದಾಹರಣೆಗೆ, ಅನುಮೋದಿತ ಗುಣಕ ಮತ್ತು ದರ್ಜೆಯ ವೇತನವನ್ನು ಅವಲಂಬಿಸಿ ಪ್ರಸ್ತುತ 40,000 ರೂ. ಮೂಲ ವೇತನವು 1,00,000 ರೂ.ಗೆ ಏರಿಕೆಯಾಗಬಹುದು.



kass

ಆದ್ದರಿಂದ ತಾವು ತಮ್ಮ ಜಿಲ್ಲಾ / ತಾಲ್ಲೂಕು ವ್ಯಾಪ್ತಿಯಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗುರುತಿಸಿರುವ ಖಾಸಗಿ ಆಸ್ಪತ್ರೆ /ಆರೋಗ್ಯ ಸಂಸ್ಥೆಗಳೂ ಸೇರಿದಂತೆ (ಆಸ್ಪತ್ರೆಗಳ ಪಟ್ಟಿ ಲಗತ್ತಿಸಿದೆ) ಇನ್ನಾವುದೇ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳಿದ್ದಲ್ಲಿ ಅಂತಹ ಆಸ್ಪತ್ರೆಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಿಕೊಳ್ಳುವ ಸಂಬಂಧ ತಮ್ಮ ಜಿಲ್ಲಾ ಸಂಯೋಜಕರು (District Coordinators of SATS) ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿ ದಿನಾಂಕ: 28-04-2028ರೊಳಗಾಗಿ ನೋಂದಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧ ತುರ್ತು ಕ್ರಮವಹಿಸಲು ಸೂಚಿಸಿದೆ.

ಸೋಮವಾರ, ಮೇ 19, 2025

ಸರ್ಕಾರಿ ನೌಕರರು ವಿಶೇಷ ವೇತನ ಬಡ್ತಿಗೆ ಅರ್ಹರಾಗುತ್ತಾರೆ

ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡಿರುವ ಸರ್ಕಾರಿ ನೌಕರರು ವಿಶೇಷ ವೇತನ ಬಡ್ತಿಗೆ ಅರ್ಹರಾಗುತ್ತಾರೆ. ಸರ್ಕಾರ ಈ ಬಡ್ತಿಯನ್ನು ವೈಯಕ್ತಿಕ ವೇತನ ರೂಪದಲ್ಲಿ ನೀಡಿ, ನೌಕರರಿಗೆ ಗೌರವ ನೀಡುತ್ತದೆ. ಪರಿಷ್ಕೃತ ರಾಜ್ಯ ವೇತನ ಶ್ರೇಣಿಗಳ ಆರ್ಥಿಕ ಸೌಲಭ್ಯವನ್ನು 2024ರ ಆಗಸ್ಟ್ 1ರಿಂದ ಜಾರಿಗೆ ತರಲಾಗುತ್ತಿದೆ.

ಹಾಗಾಗಿ, 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯಲ್ಲಿ ಮಿತ ಕುಟುಂಬ ಕ್ರಮ ಅನುಸರಿಸಿದ ನೌಕರರಿಗೆ ಕಾಲ್ಪನಿಕವಾಗಿ ವಿಶೇಷ ವೇತನ ಬಡ್ತಿ ನೀಡಲಾಗುತ್ತದೆ. ಈ ಬಡ್ತಿ ಜುಲೈ 1, 2022ರಿಂದ ಜಾರಿಗೆ ಬಂದಂತೆ ಪರಿಗಣಿಸಲಾಗುತ್ತದೆ, ಆದರೆ ನಿಜವಾದ ಹಣಕಾಸು ಲಾಭವನ್ನು ಅವರು 2024ರ ಆಗಸ್ಟ್ 1ರಿಂದ ಮಾತ್ರ ಪಡೆಯುತ್ತಾರೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

2022ರಿಂದ 2024ರ ಅವಧಿಯಲ್ಲಿ, ನೌಕರರು ಈ ವಿಶೇಷ ಬಡ್ತಿಯಿಂದ ಉಂಟಾಗುವ ಹಣಕಾಸು ಲಾಭಕ್ಕೆ ಅರ್ಹರಾಗಿರುವುದಿಲ್ಲ. ಈ ಅವಧಿಗೆ ಹಳೆಯ ವೇತನ ಶ್ರೇಣಿಯ ಆಧಾರದ ಮೇಲೆ ಬಡ್ತಿ ಲಭ್ಯವಾಗುತ್ತದೆ. ಇದು ವಾರ್ಷಿಕ ವೇತನ ಬಡ್ತಿಯ ದರದಲ್ಲಿ ಜಾರಿಗೆ ಬರಲಿದೆ ಮತ್ತು ನೌಕರರಿಗೆ ಈ ಆಧಾರದ ಮೇಲೆ ಮುಂದಿನ ವೇತನ ಲೆಕ್ಕಾಚಾರ ನಡೆಯುತ್ತದೆ.

ಸೌಲಭ್ಯ ಪಡೆಯಲು, ನೌಕರರು 1 ಅಕ್ಟೋಬರ್ 1985ರಂದು ಹೊರಡಿಸಿದ ಸರ್ಕಾರಿ ಆದೇಶದ (Ae 27 SRS 1985) ಅಡಿಯಲ್ಲಿ ನಿಗದಿಪಡಿಸಿದ ಎಲ್ಲಾ ಷರತ್ತುಗಳನ್ನು ಪೂರೈಸಿರಬೇಕು. ಅಲ್ಲದೆ, ಬಳಿಕದ ವರ್ಷಗಳಲ್ಲಿ ಹೊರಡಿಸಲಾದ ಯಾವುದೇ ಸುತ್ತೋಲೆ, ಸೇರ್ಪಡೆ ಆದೇಶಗಳ ನಿಯಮಗಳನ್ನು ಕೂಡ ಅನುಸರಿಸಬೇಕಾಗಿದೆ.

ಹೊಸ ಆದೇಶವು ನೌಕರರಿಗಾಗಿ ಹೊರಡಿಸಿದ ಗಂಭೀರ ಮತ್ತು ಶಿಸ್ತುಪೂರ್ಣ ನಿರ್ದೇಶನವಾಗಿದ್ದು, ಹಣಕಾಸು ಹಾಗೂ ನೀತಿ ಪರಿಪಾಲನೆಯ ದೃಷ್ಟಿಯಿಂದ ಸಮತೋಲಿತ ಕ್ರಮವನ್ನೇ ಅನುಸರಿಸಿದೆ. ಮಿತ ಕುಟುಂಬ ಯೋಜನೆಗೆ ಉತ್ತೇಜನ ನೀಡುವ ಮೂಲಕ ನೌಕರರ ಸಾಮಾಜಿಕ ಜವಾಬ್ದಾರಿ ಮನಸ್ಸನ್ನು ಗುರುತಿಸಿ, ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಭಾನುವಾರ, ಮೇ 18, 2025

ಜನ ಔಷಧ ಕೇಂದ್ರ

ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ರೋಗಿಗಳಿಗೆ ಸಲಹಾ ಚೀಟಿ (Prescription) ರೂಪದಲ್ಲಿ ನೀಡುವುದನ್ನು ನಿಷೇಧಿಸಲಾಗಿದೆ ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರದ ಔಷಧಿಗಳನ್ನು ಸಂಬಂಧಿಸಿದ ವೈದ್ಯರುಗಳು, ರೋಗಿಗಳಿಗೆ ನೀಡುವ ಸಲಹಾ ಚೀಟಿ (Prescription) ಗಳನ್ನು Generic ಹೆಸರಿನಲ್ಲಿ ಬರೆಯಲು ಕಡ್ಡಾಯವಾಗಿ ಸೂಚಿಸಿದೆ. ಈ ಔಷಧಿಗಳನ್ನು ಆರೋಗ್ಯ ಸಂಸ್ಥೆಯ ಆವರಣದಲ್ಲಿ ಸ್ಥಾಪಿಸಿರುವ ಜನೌಷಧಿ ಮಳಿಗೆಯಲ್ಲಿ ಕಡಿಮೆ ದರದಲ್ಲಿ ಔಷಧಿ ಸಿಗುವ ಬಗ್ಗೆ ರೋಗಿಗಳಿಗೆ ವಿವರಿಸಿ ಅಲ್ಲಿಂದ ಆ ಔಷಧಿಗಳನ್ನು ಖರೀದಿಸಲು ಸಲಹೆ ನೀಡುವಂತೆ ಸಹ ಸೂಚಿಸಿದೆ ಹಾಗೂ ಜನರಿಕ್ ಔಷಧಿಗಳು, ಬ್ರಾಂಡೆಡ್ ಔಷಧಿಯಷ್ಟೇ ಉತ್ತಮ ಗುಣಮಟ್ಟ, ರೋಗನಿವಾರಕ ಸಾಮರ್ಥ್ಯ ಹೊಂದಿರುತ್ತದೆ ಎಂದು ರೋಗಿಗಳಿಗೆ ಶಿಕ್ಷಣ ಹಾಗೂ ಪುಚಾರದ ಮೂಲಕ ಜಾಗೃತಿ ಮೂಡಿಸುವುದು ಮತ್ತು ಜನರಿಕ್ ಔಷಧಿಗಳನ್ನು ಈ ಒಂದು ಸದುದ್ದೇಶಕ್ಕಾಗಿ ತೆರೆದಿರುವ ಜನೌಷಧಿ ಮಳಿಗೆಗಳ ಮೂಲಕವೇ ಖರೀದಿಸಲು ಜನಸಾಮಾನ್ಯರಿಗೆ ಉತ್ತೇಜನದ ಮುಖಾಂತರ ತಿಳುವಳಿಕೆ ನೀಡಲು ಆದೇಶಿಸಿದೆ ಎಂದಿದೆ.

ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಏಕಕಡತದಲ್ಲಿ ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪಸ್ತುತ 207 ಜನೌಷಧಿ ಕೇಂದ್ರಗಳಿಗೆ ಅನುಮತಿ ನೀಡಲಾಗಿರುತ್ತದೆ. ಅರ್ಜಿದಾರರು ಜನೌಷಧಿ ಕೇಂದ್ರಗಳ ಸ್ಥಾಪನೆಗೆ ಸಲ್ಲಿಸಿದ ಅರ್ಜಿಯನ್ನು ARS ಮುಂದೆ ಮಂಡಿಸಿ ಅದರ ಅನುಮೋದನೆಯ ನಂತರ ಆಯುಕ್ತರ ಮುಖಾಂತರ ಸರ್ಕಾರಕ್ಕೆ ಸಲ್ಲಿಸಿ, ಸರ್ಕಾರದಿಂದ ಅನುಮೋದನೆ ಆದ ನಂತರ ಅರ್ಜಿದಾರರಿಗೆ ಅನುಮತಿ ನೀಡಲಾಗುತ್ತದೆ. ಆದುದರಿಂದ, ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸುವ ನೀತಿಗೆ ಸಂಬಂಧಿಸಿದಂತೆ ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿರುತ್ತದೆ ಎಂದು ಹೇಳಿದೆ.

ಪ್ರಸ್ತುತ ಜನೌಷಧಿ ಕೇಂದ್ರಗಳ ಸ್ಥಾಪನೆಗೆ 31 ಅರ್ಜಿಗಳು ಆಯುಕ್ತರ ಹಂತದಲ್ಲಿ ಬಾಕಿ ಇರುತ್ತವೆ. ಸದರಿ ಜನೌಷಧಿ ಕೇಂದ್ರಗಳ ಸ್ಥಾಪನೆಗೆ ಸಂಬಂಧಿಸಿದ ಈಗಿನ ನೀತಿಯು, ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಾಲಿಸಿಯನ್ನು ಮರುಪರಿಶೀಲಿಸುವುದು ಅಗತ್ಯವಿರುತ್ತದೆ. ಆದುದರಿಂದ ಆಯುಕ್ತಾಲಯದಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಬಗ್ಗೆ ಕ್ರಮ ಕೈಗೊಳ್ಳುವ ಕುರಿತು ನಿರ್ದೇಶನ ಕೋರಿರುತ್ತಾರೆ.

ಪುಸ್ತುತ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ಔಷಧಿಗಳನ್ನು ಹೊರಗಿನಿಂದ ಖರೀದಿಸಲು ಶಿಫಾರಸ್ಸನ್ನು ಮಾಡದಂತೆ ನೋಡಿಕೊಳ್ಳುವುದು ಸರ್ಕಾರ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದೊಳಗೆ ಜನಔಷಧಿ ಕೇಂದ್ರಗಳನ್ನು ತೆರೆಯುವುದು ಸರ್ಕಾರದ ನೀತಿಗೆ ವ್ಯತಿರಿಕ್ತವಾಗುತ್ತದೆ. ಭಾರತದ ಬಿ.ಪಿ.ಪಿ.ಐ ಬ್ಯೂರೋ ಆಫ್ ಫಾರ್ಮ ಈ ಜನೌಷಧಿ ಕೇಂದ್ರಗಳಿಗೆ ನೋಡಲ್ ಕೇಂದ್ರ ಸಂಸ್ಥೆಯಾಗಿದ್ದು, ಈ ಕೇಂದ್ರಗಳಿಂದ ಖರೀದಿಸುವ ಔಷಧಿಗಳಿಗೆ ವಿಶೇಷ ರಿಯಾಯ್ತಿಯನ್ನು ಒದಗಿಸುತ್ತದೆ.
ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪುಸ್ತಾವನೆ ಮತ್ತು ಲಭ್ಯವಿರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಜನೌಷಧಿ ಕೇಂದ್ರಗಳ ಹಂಚಿಕೆಯನ್ನು ಸ್ಥಗಿತಗೊಳಿಸಲು ಮತ್ತು ಅದಕ್ಕೆ ಅನುಗುಣವಾಗಿ ಜನೌಷಧಿ ಕೇಂದ್ರಗಳ ಪ್ರಾರಂಭಕ್ಕಾಗಿ ಆಯುಕ್ತಾಲಯದಲ್ಲಿ ಅನುಮೋದನೆಗಾಗಿ ಬಾಕಿ ಇರುವ 31 ಅರ್ಜಿಗಳನ್ನು ತಿರಸ್ಕರಿಸಲು ಅನುಮೋದನೆ ನೀಡಿ ಆದೇಶಿಸಿದೆ.

ಆದಾಗ್ಯೂ, ಸರ್ಕಾರಿ ಆಸ್ಪತ್ರೆಗಳ ಹೊರಗೆ ಜನೌಷಧಿ ಕೇಂದ್ರಗಳ ಸ್ಥಾಪನೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರದ ಕಾರಣ ಮುಂದುವರಿಯಬಹುದಾಗಿದೆ.

ಮುಂದುವರೆದು, ಪ್ರಸ್ತುತ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಅಸ್ತಿತ್ವದಲ್ಲಿರುವ ಜನೌಷದಿ ಕೇಂದ್ರಗಳನ್ನು ಅವರೊಂದಿಗೆ ಮಾಡಿಕೊಂಡಿರುವ ಒಪ್ಪಂದ ನಿಯಮಗಳ (MOU) ಪುಕಾರ ಸ್ಥಗಿತಗೊಳಿಸಲು ಅಗತ್ಯ ಕ್ರಮವಹಿಸತಕ್ಕದ್ದು. ಹಾಗೆಯೇ, ಜೆನೆರಿಕ್ ಔಷಧಿಗಳ ಖರೀದಿಗೆ ಬಿ.ಪಿ.ಪಿ.ಐ ಯೊಂದಿಗೆ ಕೆ.ಎಸ್.ಎಂ.ಎಸ್.ಸಿ.ಎಲ್ ರವರು ವಿಶೇಷ ದರಗಳನ್ನು ರೂಪಿಸಲು ಸೂಚಿಸಿದೆ. ಪರ್ಯಾಯವಾಗಿ, ಆಸ್ಪತ್ರೆಗಳು ಬಿ.ಪಿ.ಪಿ.ಐ (BPPI) ಯಿಂದ ಔಷಧಿಗಳನ್ನು ಖರೀದಿಸಿ ರೋಗಿಗಳಿಗೆ ಉಚಿತವಾಗಿ ವಿತರಿಸಲು ಕ್ರಮವಹಿಸಕ್ಕದ್ದು ಎಂಬುದಾಗಿ ತಿಳಿಸಿದೆ.


ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೂ ಸಹ ವಿಸ್ತರಿಸುವ ಬಗ್ಗೆ ಸರ್ಕಾರ ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಮೇಲೆ (2)ರಲ್ಲಿ ಓದಲಾದ ದಿನಾಂಕ:28.11.2023ರ ಸರ್ಕಾರಿ ಆದೇಶದ ಅನುಬಂಧ-2ರಲ್ಲಿ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ನೌಕರರಿಗೆ ಗ್ರೂಪ್ ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್ ಸಿ ಯಿಂದ ಗ್ರೂಪ್-ಸಿ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಮರಿನಲ್ಲಿ 5, 30, 55, 82ನೇ ಬಿಂದುಗಳನ್ನು ಗುರುತಿಸಲಾಗಿದೆ.

ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ಸೇರಿದ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೂ ಸಹ ವಿಸ್ತರಿಸುವ ಬಗ್ಗೆ ಸರ್ಕಾರ ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

  1. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ:28.03.2023ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 121 ಸೆನೆನಿ 2020ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ದಿನಾಂಕ:28.03.2023ರ ಆದೇಶದಲ್ಲಿನ ಎಲ್ಲಾ ಷರತ್ತು ಮತ್ತು ಉಪಬಂಧಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದದ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ದಿನಾಂಕ:28.11.2023ರ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 266 ಸೆನನಿ 2022ರ ಅನುಬಂಧ-1ರಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಟರ್ ವರ್ತುಲದಲ್ಲಿ 5, 30, 55 ಮತ್ತು 82ನೇ ಮೀಸಲಾತಿ ಬಿಂದುಗಳನ್ನು ಪರಿಗಣಿಸತಕ್ಕದ್ದು.
    ದಿನಾಂಕ:28.11.2023ರ ರೋಸ್ಮರಿನನ್ವಯ ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ಹುದ್ದೆಗಳಿಗೆ ಈಗಾಗಲೇ ಮುಂಬಡ್ತಿ ನೀಡಿದ್ದಲ್ಲಿ ಯಾವ ಬಿಂದುವಿನವರೆಗೆ ಮುಂಬಡ್ತಿ ನೀಡಲಾಗಿದೆಯೋ ಜಾರಿಗೊಳಿಸತಕ್ಕದ್ದು. ನಂತರದ ಬಿಂದುವಿನಿಂದ 7 ಈ ಆದೇಶವನ್ನು ಸಚಿವ ಸಂಪುಟ ಸಭೆಯ ಪ್ರಕರಣ ಸಂಖ್ಯೆ:249/2025 ದಿನಾಂಕ:09.05.2025ರಲ್ಲಿನ ನಿರ್ಣಯದಂತೆ ಹೊರಡಿಸಿದೆ.

ಮಂಗಳವಾರ, ಮೇ 13, 2025

ವರ್ಗಾವಣೆ

ಅದರಲ್ಲಿ 2025-26 ಸಾಲಿನ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಚಿಸುತ್ತದೆ. ಈ ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ.

2. ವಿವರಣೆ:-ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು,-
(1) "ಸಕ್ಷಮ ಪ್ರಾಧಿಕಾರ" ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ.
(2) "ವರ್ಗಾವಣೆ" ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಛೇರಿಯ ಪಸ್ತುತ ಇರುವ ಕೇಂದ್ರ ಸ್ನಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ ಕಛೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ.

(3) "ಚಲನವಲನ" ಎಂದರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಛೇರಿಯಿಂದ ಇನ್ನೊಂದು ಕಛೇರಿಗೆ ಮಾಡುವ ಸ್ಥಳನಿಯುಕ್ತಿ. ಇದು ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ.

ವಿವರಣೆ: ಚಲನವಲನ ಪ್ರಕರಣಗಳನ್ನು ವರ್ಗಾವಣೆಯೆಂದು ಪರಿಗಣಿಸತಕ್ಕದ್ದಲ್ಲ. ಈ ವರ್ಗಾವಣೆ ಮಾರ್ಗಸೂಚಿಗಳು ಚಲನವಲನ ಪಕರಣಗಳಿಗೆ ಅನ್ವಯಿಸತಕ್ಕದ್ದಲ್ಲ.
(4) 'ಗುಂಪು-'ಎ', 'ಬಿ', 'ಸಿ', ಮತ್ತು 'ಡಿ' ವೃಂದದ ಹುದ್ದೆಗಳು ಎಂದರೆ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಗುಂಪು-ಎ, ಬಿ, ಸಿ ಮತ್ತು ಡಿ ವೃಂದದ ಸರ್ಕಾರಿ ಹುದ್ದೆಗಳು ಮತ್ತು ಕ್ರಮವಾಗಿ ಅಧಿಕಾರ ಹೊಂದಿರುವ ನೇಮಕಾತಿ ಪ್ರಾಧಿಕಾರದ ವ್ಯಾಪ್ತಿ

3. ವರ್ಗಾವಣಾ ಪ್ರಕ್ರಿಯೆ:-

ವರ್ಗಾವಣೆ/ಚಲನವಲನಗಳನ್ನುಸಕ್ಷಮ ಪ್ರಾಧಿಕಾರವು ಮುಖ್ಯವಾಗಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಪಾರದರ್ಶಕವಾಗಿ ಮಾಡಬೇಕು.

4. ವರ್ಗಾವಣೆಯ ಬಗ್ಗೆ ನಿರ್ಬಂಧಗಳು :

ಪುಸಕ್ತ 2025-26ನೇ ಸಾಲಿನಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆಯು ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ ದಿನಾಂಕ:15.05.2025 ರಿಂದ ದಿನಾಂಕ:14.06.2025 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು, ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.

5. ಸಕ್ಷಮ ಪ್ರಾಧಿಕಾರದ ಹಾಗೂ ನೌಕರನ ಜವಾಬ್ದಾರಿಗಳು:-

ಸಕ್ಷಮ ಪ್ರಾಧಿಕಾರವು ವರ್ಗಾವಣೆ | ಚಲನವಲನ ಮಾಡುವಾಗ ಈ ಕೆಳಗಿನ ಅಂಶಗಳನ್ನೂ ಸಹ ಖಚಿತಪಡಿಸಿಕೊಳ್ಳತಕ್ಕದ್ದು.
(1) ಯಾವುದೇ ಸರ್ಕಾರಿ ನೌಕರರ ವರ್ಗಾವಣೆಯಾದ ಸಂದರ್ಭಗಳಲ್ಲಿ ಯಾವುದೇ ನೌಕರರು ಸ್ಥಳ ನಿಯುಕ್ತಿಗಾಗಿ ಕಾಯದಂತೆ ಕಡ್ಡಾಯವಾಗಿ ಸ್ಥಳ ನಿಯುಕ್ತಿ ನೀಡತಕ್ಕದ್ದು. ಈ ರೀತಿ ಹಲವಾರು ಸರ್ಕಾರಿ ನೌಕರರು ಸ್ಥಳ ನಿಯುಕ್ತಿಗಾಗಿ ಕಾಯುವುದರಿಂದ ಸರ್ಕಾರಕ್ಕೆ ಅನವಶ್ಯಕ ಆರ್ಥಿಕ ಹೊರೆಯಾಗುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳತಕ್ಕದ್ದು.

(2) ಯಾವುದೇ ಸರ್ಕಾರಿ ನೌಕರನ ವಿರುದ್ಧ ಗಂಭೀರ ಸ್ವರೂಪದ ಆರೋಪಗಳ ಬಗ್ಗೆ ಆತನ ವಿರುದ್ಧ ಇಲಾಖಾ ವಿಚಾರಣೆ ಕ್ರಿಮಿನಲ್ ನಡವಳಿ ಪ್ರಾರಂಭಿಸಲಾಗಿದ್ದಲ್ಲಿ ಅಥವಾ ಬಾಕಿಯಿದ್ದಲ್ಲಿ ಅಥವಾ ಆತನನ್ನು ಅಭಿಯೋಜನೆಗೊಳಿಸಲು ಉದ್ದೇಶಿಸಲಾಗಿದ್ದಲ್ಲಿ ಅಂತಹವರಿಗೆ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ / ಇಲಾಖಾ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡಬಹುದಾದ ಹುದ್ದೆಗಳಿಗೆ ನೇಮಿಸದೇ ಆಡಳಿತಾತ್ಮಕ ಅನುಕೂಲಕ್ಕೆ (Administrative exigency) ಅನುಗುಣವಾದ ಕಾರ್ಯಕಾರಿಯೇತರ (Non- Executive) ಹುದ್ದೆಗಳಿಗೆ ನೇಮಿಸತಕ್ಕದ್ದು. ಮುಂದುವರೆದು, ಇಲಾಖಾ ವಿಚಾರಣೆ / ಕ್ರಿಮಿನಲ್ ಮೊಕದ್ದಮೆ ಬಾಕಿಯಿರುವ ಸರ್ಕಾರಿ ನೌಕರರನ್ನು ಅವರು ಕೋರುವ ಹುದ್ದೆಗೆ ಸ್ಥಳನಿಯುಕ್ತಿಗೊಳಿಸಬಾರದು.

(3) ವರ್ಗಾವಣೆಗೊಂಡ ಸರ್ಕಾರಿ ನೌಕರನು ವರ್ಗಾವಣೆ ಆದೇಶವನ್ನು ಹೊರಡಿಸುವ ಪೂರ್ವದಲ್ಲಿ ಅಥವಾ ಸೇರುವಿಕೆ ಕಾಲದಲ್ಲಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ (as inpatient) ಚಿಕಿತ್ಸೆಯನ್ನು ಪಡೆಯುವ ಸಂದರ್ಭದಲ್ಲಿ ಮಾತ್ರ, ಅಗತ್ಯ ದಾಖಲೆಗಳೊಂದಿಗೆ ಹಾಗೂ ವೈದ್ಯಕೀಯ ಮಂಡಳಿಯ ದೃಢೀಕರಣ ಪತ್ರದೊಂದಿಗೆ ರಜೆಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಲ್ಲಿ, ವೈದ್ಯಕೀಯ ಕಾರಣಗಳ ಮೇಲೆ ರಜೆಯನ್ನು ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರ ಪರಿಶೀಲಿಸಿ ರಜೆಯನ್ನು ಮಂಜೂರು ಮಾಡುವ ಬಗ್ಗೆ ನಿರ್ಣಯಿಸಬಹುದಾಗಿದೆ.

(4) ಒಳರೋಗಿಯಾಗಿದ್ದವರು ಆಸ್ಪತ್ರೆಯಿಂದ ಬಿಡುಗಡೆಯಾಗಿ, ತದನಂತರ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ವೈದ್ಯಕೀಯ ಸಲಹೆ ಮೇರೆಗೆ ಚಿಕಿತ್ಸೆ/ ವಿಶ್ರಾಂತಿ ಪಡೆಯುತ್ತಿದ್ದರೆ, ಅವರು ವರ್ಗಾವಣೆಗೊಂಡ ಸ್ಥಳದಲ್ಲಿ ಸೇರಿಕೆ ಕಾಲದೊಳಗೆ ಕರ್ತವ್ಯಕ್ಕೆ ಹಾಜರಾಗಿ, ರಜಾ ಅರ್ಜಿಯನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿ, ರಜೆ ಮಂಜೂರು ಮಾಡಿದ ನಂತರವೇ ರಜೆ ಮೇಲೆ ತೆರಳಬಹುದು. ಇಲ್ಲದಿದ್ದಲ್ಲಿ ಸೇರಿಕೆ ಕಾಲ ಮೀರಿದ ಅವಧಿಯನ್ನು ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸತಕ್ಕದ್ದು.

6. ಈ ಕೆಳಕಂಡ ಸಂದರ್ಭಗಳನ್ನು ಹೊರತುಪಡಿಸಿ ಸಕ್ಷಮ ಪ್ರಾಧಿಕಾರಗಳು ವರ್ಗಾವಣೆಗಳನ್ನು ಸಾರ್ವತ್ರಿಕ ವರ್ಗಾವಣೆ ಅವಧಿಯ ನಂತರದಲ್ಲಿ ಮಾಡತಕ್ಕದ್ದಲ್ಲ-
(1) ಒಬ್ಬ ಸರ್ಕಾರಿ ನೌಕರನನ್ನು ಸೇವೆಯಿಂದ ಅಮಾನತ್ತಿನಲ್ಲಿಡುವ ಬದಲು ವರ್ಗಾಯಿಸಲು/ ಚಲನವಲನಗೊಳಿಸಲು ಉದ್ದೇಶಿಸಿದಾಗ;

(2) ಹೊಸ ಕಛೇರಿ / ಹುದ್ದೆಗಳನ್ನು ಸೃಜಿಸಿದಾಗ ಅಥವಾ ನಿವೃತ್ತಿ, ಬಡ್ತಿ, ರಾಜೀನಾಮೆ, ಹಿಂಬಡ್ತಿ, ವಜಾಗೊಳಿಸುವುದರಿಂದ ಮರಣದಿಂದ, ಕಡ್ಡಾಯ ನಿವೃತ್ತಿಯ ಕಾರಣದಿಂದ ಹುದ್ದೆಗಳು ತೆರವಾದಾಗ ಅಥವಾ ನೇರ ನೇಮಕಾತಿ ಹೊಂದಿದವರನ್ನು ಮೊದಲು ನೇಮಿಸುವಾಗ ಅಥವಾ ಬಡ್ತಿ ಹೊಂದಿದವರನ್ನು ನೇಮಿಸುವಾಗ ಅಥವಾ ಯಾವುದೇ ಅನಿರೀಕ್ಷಿತ ಪರಿಸ್ಥಿತಿಯಿಂದ ಉದ್ಭವವಾದ ಹುದ್ದೆಗಳನ್ನು ತಕ್ಷಣ ತುಂಬಬೇಕಾದಾಗ;

(3) ವಿಶೇಷವಾದ ಅಥವಾ ಅಪವಾದಾತ್ಮಕ ಕಾರಣಗಳ ಮೇರೆಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ ನಿರ್ದಿಷ್ಟ ಪ್ರಕರಣಗಳಲ್ಲಿ ವರ್ಗಾವಣೆಯು ಅವಶ್ಯವೆನಿಸಿದಲ್ಲಿ ಇದಕ್ಕೆ ಕಾರಣಗಳನ್ನು ಲಿಖಿತ ಮೂಲಕ ದಾಖಲಿಸಿ ಇಂತಹ ಪ್ರಕರಣಗಳನ್ನು ಕಡ್ಡಾಯವಾಗಿ ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ವರ್ಗಾವಣೆ ಮಾಡತಕ್ಕದ್ದು.

(4) ಯಾವುದೇ ಸರ್ಕಾರಿ ನೌಕರನ ವಿರುದ್ಧ ಮೇಲ್ನೋಟಕ್ಕೆ ಗಂಭೀರ ಸ್ವರೂಪದ ದೂರು ದಾಖಲಾಗಿರುವ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಆರೋಪವಿದೆಯೆಂಬ ಬಗ್ಗೆ ಇಲಾಖಾ ಮುಖ್ಯಸ್ಥರು ಅಭಿಪ್ರಾಯಪಟ್ಟಿದ್ದಲ್ಲಿ ಅಂತಹ ಪಕರಣಗಳಲ್ಲಿ ಸರ್ಕಾರಿ ನೌಕರನಿಗೆ ದೋಷಾರೋಪಣೆ ಪಟ್ಟಿ/ಚಾರ್ಜ್‌ಶೀಟ್ ಜಾರಿಯಾಗಿರುವುದು ಅಥವಾ ಸಕ್ಷಮ ನ್ಯಾಯಾಲಯದಲ್ಲಿ ಅಧಿಕಾರಿಯನ್ನು ಅಭಿಯೋಜಿಸುವ ಬಗ್ಗೆ ಅನುಮತಿ ನೀಡಿರುವುದು ಖಚಿತವಾದ ಪ್ರಕರಣಗಳಲ್ಲಿ.


ಶನಿವಾರ, ಮೇ 10, 2025

Dhishank app


ಈ ಮೊಬೈಲ್ ಅಪ್ಲಿಕೇಷನ್‌ನಲ್ಲಿ ಜಿಪಿಎಸ್ ಮೂಲಕ ಯಾವುದೇ ಮೂಲೆಯಲ್ಲಿರುವ ಆಸ್ತಿ ಮತ್ತು ಜಮೀನಿನ ಬಗ್ಗೆ ತಕ್ಷಣ ಮಾಹಿತಿ ತಿಳಿದುಕೊಳ್ಳಬಹುದು. ದಿಶಾಂಕ್‌ ಆಯಪ್‌ ಅನ್ನು ಗ್ರಾಮ ಮಟ್ಟದಲ್ಲಿ ಪರಿಚಯಿಸಲು ಸರಕಾರ ನಿರ್ಧರಿಸಿದೆ. ಅದರಂತೆ ಗ್ರಾಮ ಠಾಣಾ ವ್ಯಾಪ್ತಿಯ ನಿವೇಶನ, ಭೂಮಿಯಲ್ಲಿ ಮನೆ ಕಟ್ಟಬೇಕೆಂದರೆ ಇ-ಖಾತೆಯನ್ನು ಶೀಘ್ರವಾಗಿ ಪಡೆಯಲು ಇದು ನೆರವಾಗಲಿದೆ. ಈವರೆಗೆ ಗ್ರಾಹಕರು ಅರ್ಜಿಯೊಂದಿಗೆ 800 ರೂ. ಶುಲ್ಕ ಪಾವತಿಸಬೇಕಿತ್ತು. ಇದೀಗ ದಿಶಾಂಕ್‌ನಿಂದಾಗಿ 200 ರೂ. ಪಾವತಿಸಿದರೆ ಸಾಕು.ರೈತರ ಜಮೀನಿನ ನೆರೆಹೊರೆಯ ಜಮೀನು ಕೆರೆ ಕಟ್ಟೆ, ಹಳ್ಳಕೊಳ್ಳ ಖರಾಬು ಜಮೀನಿದ್ದರೆ ರೈತರು ದಿಶಾಂಕ್ ಆಯಪ್ ಸಹಾಯದಿಂದ ಪಡೆಯಬಹುದು.

ಸಾರ್ವಜನಿಕರು ಭೂಮಿ, ನಿವೇಶನ ಅಥವಾ ಫ್ಲ್ಯಾಟ್ ಖರೀದಿ ವೇಳೆ ವಂಚನೆ ಗೊಳಗಾಗುವುದನ್ನು ತಪ್ಪಿಸಲು ರಾಜ್ಯ ಭೂಮಾಪನ, ಕಂದಾಯ ಮತ್ತು ಭೂದಾಖಲೆಗಳ ಇಲಾಖೆಯು ವಿನೂತನ ಆಯಪ್ ವೊಂದನ್ನು ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಿದೆ.ಭೂಗಳ್ಳರು ಸರಕಾರಿ ಭೂಮಿ, ಖರಾಬು, ಗೋಮಾಳ, ಕೆರೆ ಅಂಗಳ, ಜಾಗವನ್ನು ಕಬಳಿಸಿ, ಇತರರಿಗೆ ಮಾರಾಟ ಮಾಡಿ ವಂಚಿಸಿರುವ ಪ್ರಕರಣಗಳು ಸಾಕಷ್ಟಿವೆ. ದಿಶಾಂಕ್ ಆಪ್ ಜಿಪಿಎಸ್ ಆಧರಿಸಿ ಕಾರ್ಯ ನಿರ್ವಹಿಸುತ್ತದೆ. ನೀವು ನಿಂತಿ ರುವ ಸ್ಥಳದಲ್ಲಿ ಅಪ್ ತೆರೆದರೆ, ಸ್ಯಾಟ ಲೈಟ್ ಅಥವಾ ಗೂಗಲ್ ಮ್ಯಾಪ್ ಸಹಿತ ವಾಗಿ ಸರ್ವೆ ಸಂಖ್ಯೆಯನ್ನು ತಿಳಿಸುತ್ತದೆ. ಹಾಗೆಯೇ, ಅದರಲ್ಲಿ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮವನ್ನು ಆಯ್ಕೆ ಮಾಡಿ ಸರ್ವೇ ಸಂಖ್ಯೆಯನ್ನು ನಮೂದಿಸಿದರೆ, ಅದರ ನಕಾಶೆ ಕಾಣ ಸಿಗುತ್ತದೆ.ದಿಶಾಂಕ್ ಆಯಪ್ ಒದಗಿಸುವ ಮಾಹಿತಿಯಿಂದ ಜನರು ನಿಶ್ಚಿಂತೆಯಿಂದ ನಿವೇಶನ, ಫ್ಲ್ಯಾಟ್ ಮಾಡಬಹುದು.

ದಿಶಾಂಕ್ ಆಯಪ್ ಉಪಯೋಗಗಳು

*ಯಾವುದಾದರೂ ಆಸ್ತಿಯ ನಿಖರ ಸರ್ವೇ ನಂಬರ್ ನ್ನು ಪಡೆಯಲು ಸಹಕಾರಿಯಾಗಿದೆ.

*ಎಲ್ಲಾ ಸಾರ್ವಜನಿಕರು, ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಅತಿ ಉಪಯುಕ್ತ ಆಯಪ್ ಇದು.

ಇ-ಸ್ವತ್ತು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

ಗ್ರಾಮ ಪಂಚಾಯತಿಯಲ್ಲೇ ಇ-ಸ್ವತ್ತು ಪ್ರಮಾಣ ಪತ್ರದ ಸಂಪೂರ್ಣ ಅರ್ಜಿ ವಿಲೇವಾರಿಗೆ ಅವಕಾಶ ನೀಡಲಾಗಿದ್ದು ಸಾರ್ವಜನಿಕರು ತಮ್ಮ ಹಳ್ಳಿ ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯತಿಯನ್ನು ನೇರವಾಗಿ ಅಗತ್ಯ ದಾಖಲೆಗಳ ಸಮೇತ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಅಗತ್ಯ ದಾಖಲೆಗಳು:

ಅರ್ಜಿದಾರರ ಆಧಾರ್ ಕಾರ್ಡ ಪ್ರತಿ

ಕುಟುಂಬದ ವಂಶವೃಕ್ಷ ಪ್ರಮಾಣ ಪತ್ರ

ಅರ್ಜಿದಾರರ ಪೋಟೋ

ಮನೆ ಅಥವಾ ಖಾಲಿ ಖಾಗದ ಪೋಟೋ ಕಾಪಿ

ಕಂದಾಯ ರಶೀದಿ

ವಿದ್ಯುತ್ ಬಿಲ್

ಕೈಬರಹದ ಅರ್ಜಿ

Tax-free Income Sources: ಈ ರೀತಿ ಹಣ ಗಳಿಸಿದ್ರೆ ಟ್ಯಾಕ್ಸ್ ಕಟ್ಬೇಕಾಗಿಲ್ಲ, ತೆರಿಗೆ ಮುಕ್ತ ಆದಾಯದ ಮೂಲಗಳಿವು

ಕೆಲ ಆದಾಯಗಳು ತೆರಿಗೆ ಮುಕ್ತವಾಗಿವೆ. ತೆರಿಗೆ ಪಾವತಿಗೆ ಮುನ್ನ ಯಾವೆಲ್ಲ ಆದಾಯ, ತೆರಿಗೆ ಮುಕ್ತವಾಗಿದೆ ಎಂಬುದನ್ನು ತಿಳಿದುಕೊಳ್ಳಿ. ಯಾವ ಆದಾಯ ತೆರಿಗೆ ಮುಕ್ತ? : ಕೃಷಿ ...