ಹೈದರಾಬಾದ್ ಕರ್ನಾಟಕ ಪ್ರದೇಶ

ಹೈದರಾಬಾದ್ ಕರ್ನಾಟಕ ಪ್ರದೇಶ
Hyderabad Karnataka

ಶುಕ್ರವಾರ, ಸೆಪ್ಟೆಂಬರ್ 19, 2025

ಸಿ, ಡಿ ಶ್ರೇಣಿಗೆ ಮೇಲ್ಪಟ್ಟವರ ಮುಂಬಡ್ತಿಗೆ ತರಬೇತಿ ಕಡ್ಡಾಯ: ಸಂಪುಟ ಸಭೆ ಒಪ್ಪಿಗೆ

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರು ಈ ವಿವರ ನೀಡಿದರು.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ಮುಂಬಡ್ತಿ ತರಬೇತಿ ಕಡ್ಡಾಯ) ನಿಯಮಗಳು, 2025ರ ಕರಡು ನಿಯಮ ಪ್ರಕಟಿಸಲಾಗುವುದು. ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ಒಂದು ವೇಳೆ ಕರಡು ನಿಯಮಗಳಿಗೆ ಯಾವುದೇ ಆಕ್ಷೇಪಣೆ, ಸಲಹೆಗಳು ಬಾರದಿದ್ದರೆ ನಿಯಮದ ಜಾರಿಗೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದರು.

ಕರಡು ಹೇಳುವುದೇನು?

ಸರ್ಕಾರದಲ್ಲಿ ಸಚಿವಾಲಯ ಸೇರಿ 100ಕ್ಕೂ ಹೆಚ್ಚು ಇಲಾಖೆ, ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತಿವೆ. ಅಧಿಕಾರಿಗಳು ತಾವು ಕಾರ್ಯ ನಿರ್ವಹಿಸುತ್ತಿರುವ ಹುದ್ದೆಯಿಂದ ನಂತರದ ಹುದ್ದೆಗೆ ಮುಂಬಡ್ತಿ ಪಡೆಯಲು ಆಯಾ ಇಲಾಖೆಗಳು ನಿಗದಿಪಡಿಸಿರುವ ತರಬೇತಿ ಮಾಡ್ಯೂಲ್‌ ಗಳಲ್ಲಿ ಕನಿಷ್ಠ 15 ದಿನಗಳ ತರಬೇತಿ ಪಡೆಯಬೇಕು. ಅಲ್ಲದೇ, ಪ್ರತಿ ಉದ್ಯೋಗಿಯು ಇಲಾಖಾ ಮುಖ್ಯಸ್ಥರು ನಿರ್ದೇಶಿಸಿದ ಕೋರ್ಸ್‌ಗಳಲ್ಲಿ ಪ್ರತಿ ವರ್ಷ ನಿಗದಿಪಡಿಸಿದ ಕನಿಷ್ಠ ಆನ್‌ಲೈನ್‌ ತರಬೇತಿ ಪಡೆಯಬೇಕು ಎಂದು ಪಾಟೀಲ ತಿಳಿಸಿದರು.

ಕಾಮೆಂಟ್‌ಗಳಿಲ್ಲ:

ರಾಜ್ಯ `ಸರ್ಕಾರಿ ನೌಕರರೇ' ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ' ನೋಂದಣಿ ಕುರಿತು ಸರ್ಕಾರದಿಂದ ಮಹತ್ವದ ಆದೇಶ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ...