ಹೈದರಾಬಾದ್ ಕರ್ನಾಟಕ ಪ್ರದೇಶ

ಹೈದರಾಬಾದ್ ಕರ್ನಾಟಕ ಪ್ರದೇಶ
Hyderabad Karnataka

ಮಂಗಳವಾರ, ನವೆಂಬರ್ 18, 2025

jobs

ಉತ್ತಮ ಉದ್ಯೋಗ ಹೊಂದಬೇಕು ಎಂದುಕೊಂಡಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತ ಸರ್ಕಾರದ ಗುಪ್ತಚರ ಇಲಾಖೆ (Intelligence Bureau)ಯಲ್ಲಿ ಖಾಲಿ ಇರುವ 362 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (IB Recruitment 2025). ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ (Multi Tasking Staff) ಹುದ್ದೆ ಇದಾಗಿದ್ದು,10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು (Job Guide). ಉದ್ಯೋಗ ಸ್ಥಳ: ದೇಶಾದ್ಯಂತ.

ಆಸಕ್ತರು ಆನ್‌ಲೈನ್‌ ಮೂಲಕ ನವೆಂಬರ್‌ 22ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಡಿಸೆಂಬರ್‌ 14.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ ಹುದ್ದೆ ಇದಾಗಿದ್ದು, ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ತೇರ್ಗಡೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಒಟ್ಟು 4 ಹುದ್ದೆಗಳಿವೆ ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವಯಸ್ಸು, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ರಿಕ್ರೂಟ್‌ಮೆಂಟ್‌ ಪ್ರೊಸೆಸಿಂಗ್‌ ಫೀಸ್‌ ಆಗಿ ಎಲ್ಲ ಅಭ್ಯರ್ಥಿಗಳು 550 ರೂ. ಪಾವತಿಸಬೇಕು. ಇನ್ನು ಪರೀಕ್ಷಾ ಶುಲ್ಕ ಎಸ್‌ಸಿ/ಎಸ್‌ಟಿ/ಮಹಿಳಾ/ಮಾಜಿ ಯೋಧರು/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಪಾವತಿಸಬೇಕಾಗಿಲ್ಲ. ಯುರ್‌/ಇಡಬ್ಲ್ಯುಎಸ್‌/ಒಬಿಸಿ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವಾಗಿ 100 ರೂ. ಆನ್‌ಲೈನ್‌/ಆಫಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಟೆಸ್ಟ್‌, ವಿವರಣಾತ್ಮಕ ಟೆಸ್ಟ್‌, ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪರೀಕ್ಷೆಯು ಸಾಮಾನ್ಯ ಜ್ಞಾನ, ಕ್ವಾಂಟಿಟೇಟಿವ್‌ ಆಪ್ಟಿಟ್ಯೂಡ್‌, ನ್ಯುಮೆರಿಕಲ್‌/ಅನಾಲಿಟಿಕಲ್‌/ಲಾಜಿಕಲ್‌ ಎಬಿಲಿಡಿ ಮತ್ತು ರೀಸನಿಂಗ್‌, ಇಂಗ್ಲಿಷ್‌ ಲ್ವಾಂಗ್ವೇಜ್‌ ಪ್ರಶ್ನೆಗಳನ್ನು ಒಳಗೊಂಡಿದೆ. ಗಮನಿಸಿ ತಪ್ಪು ಉತ್ತರಗಳಿಗೆ ನೆಗೆಟಿವ್‌ ಅಂಕ ಇದ್ದು, ಸರಿಯಾಗಿ ಯೋಚಿಸಿ ಉತ್ತರಿಸಿ. ಆಯ್ಕೆಯಾದವರಿಗೆ ಪ್ರತಿ ತಿಂಗಳು 18,000 ರೂ. - 56,900 ರೂ. ಮಾಸಿಕ ವೇತನ ದೊರೆಯಲಿದೆ.

Intelligence Bureau Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
(https://www.mha.gov.in/hi)
ಹೆಸರು ನೋಂದಾಯಿಸಿ.
ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
ಅರ್ಜಿ ಶುಲ್ಕ ಪಾವತಿಸಿ.
ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: mha.gov.inಗೆ ಭೇಟಿ ನೀಡಿ.

ಕಾಮೆಂಟ್‌ಗಳಿಲ್ಲ:

festival advance ಹಬ್ಬದ ಮುಂಗಡ

ಈ ಆದೇಶ ರಾಜ್ಯ ಸರ್ಕಾರಿ ನೌಕರರು ಹಬ್ಬದ ಮುಂಗಡ ಪಡೆಯಲು ಅಧಿಸೂಚಿಸಿರುವ ಹಬ್ಬಗಳೊಂದಿಗೆ ಹೆಚ್ಚುವರಿಯಾಗಿ ಕೆಲವು ಹಬ್ಬಗಳನ್ನು ಸೇರ್ಪಡೆಗೊಳಿಸುವ ಬಗ್ಗೆ ಎಂಬ ವಿಷಯವನ್ನು ಒ...